ಗ್ಯಾಂಗ್ಟಾಕ್: ಸಿಕ್ಕಿಂ ಲಾಚೆನ್ ಕಣಿವೆಯ ತೀಸ್ತಾ ನದಿಯಲ್ಲಿ ತಡ ರಾತ್ರಿ ಹಠಾತ್ ಪ್ರವಾಹ ಉಂಟಾಗಿ 23 ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಸಿಕ್ಕಿಂನ ಲ್ಹೋನಕ್ ಸರೋವರದಲ್ಲಿ ಹಠಾತ್ ಮೇಘಸ್ಫೋಟದಿಂದಾಗಿ ಪ್ರವಾಹ ಉಂಟಾಗಿದೆ. ಇದು ತೀಸ್ತಾದಲ್ಲಿ ನೀರಿನ ಮಟ್ಟದಲ್ಲಿ ಹಠಾತ್ ಹೆಚ್ಚಳಕ್ಕೆ ಕಾರಣವಾಯಿತು. ಚುಂಗ್‌ತಾಂಗ್ ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡಿರುವುದರಿಂದ ಪರಿಸ್ಥಿತಿ ಇನ್ನಷ್ಟು ಉಲ್ಬಣಗೊಳಿಸಿತು. ಇದರಿಂದಾಗಿ ನೀರಿನ ಮಟ್ಟವು ಹೆಚ್ಚಳಕ್ಕೆ ಕಾರಣವಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಸಿಂಗ್ಟಮ್ ಬಳಿಯ ಬರ್ದಂಗ್‌ನಲ್ಲಿ ನಿಲ್ಲಿಸಲಾಗಿದ್ದ ಸೇನಾ ವಾಹನಗಳು ಪ್ರವಾಹಕ್ಕೆ ಕೊಚ್ಚಿ ಹೋಗಿದ್ದು. ಸುಮಾರು 23 ಮಂದಿ ಸಿಬಂದಿಗಳು ನಾಪತ್ತೆಯಾಗಿದ್ದು, ಸಿಬ್ಬಂದಿ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.
ನದಿ ಉಕ್ಕಿ ಹರಿಯುತ್ತಿರುವ ಕಾರಣ ತೀಸ್ತಾ ನದಿಯ ಮೇಲಿನ ಸಿಂಗ್‌ತಮ್ ಕಾಲು ಸೇತುವೆ ಕುಸಿದಿದೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಆಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ನದಿಯ ಕೆಳಗಿನ ಜಲಾನಯನ ಪ್ರದೇಶದಿಂದ ಜನರನ್ನು ಸ್ಥಳಾಂತರಿಸಲು ಪ್ರಾರಂಭಿಸಿದೆ. ಘಟನೆಗೆ ಸಂಬಂಧಿಸಿ ಸಿಕ್ಕಿಂ ಸರ್ಕಾರ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿದ್ದು, ತೀಸ್ತಾ ನದಿಯಿಂದ ದೂರ ಉಳಿಯುವಂತೆ ಜನರನ್ನು ಜನರಿಗೆ ಎಚ್ಚರಿಕೆ ನೀಡಿದೆ.