ಬೆಂಗಳೂರು: ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿರುವ ಗಲಭೆಯನ್ನು ಖಂಡಿಸಿರುವ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಅಕ್ಟೋಬರ್ 5ರಂದು ಬೆಳಿಗ್ಗೆ 11 ಗಂಟೆಗೆ ಬಿಜೆಪಿ ಸತ್ಯಶೋಧನಾ ತಂಡ ರಾಗಿಗುಡ್ಡಕ್ಕೆ ಭೇಟಿ ನೀಡಲಿದೆ ಎಂದು ತಿಳಿಸಿದ್ದಾರೆ.
ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್. ಈಶ್ವರಪ್ಪ, ಡಾ. ಸಿ.ಎನ್. ಅಶ್ವತ್ಥನಾರಾಯಣ್, ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ಶಾಸಕ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ, ಡಿ.ಎಸ್. ಅರುಣ್, ಭಾರತಿ ಶೆಟ್ಟಿ ತಂಡದಲ್ಲಿರುವರು.
ರಾಗಿಗುಡ್ಡಕ್ಕೆ ಭೇಟಿ ನೀಡುವ ತಂಡ, ಪರಿಶೀಲನೆ ನಡೆಸಲಿದೆ ಎಂದು ಬಿಜೆಪಿ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.