ಶಿವಮೊಗ್ಗ ಗಲಭೆ ಪ್ರಕರಣವನ್ನು ಎನ್.ಐ.ಎ.ಗೆ ವಹಿಸಲು ವಿಹಿಂಪ, ಭಜರಂಗದಳ ಆಗ್ರಹ

ಪುತ್ತೂರು: ಕಳೆದ ಎರಡು ದಿನಗಳ ಹಿಂದೆ ಶಿವಮೊಗ್ಗದಲ್ಲಿ ಮಿಲಾದ್ ಆಚರಣೆ ಸಂದರ್ಭ ಹಿಂದೂಗಳ ಟಾರ್ಗೆಟ್ ಮಾಡಿ ನಡೆಸಿದ ದಾಳಿಯನ್ನು ವಿಶ್ವ ಹಿಂದೂ ಪರಿಷತ್, ಬಜರಂಗದಳ ಖಂಡನೆ ವ್ಯಕ್ತಪಡಿಸಿದ್ದು, ಘಟನೆಯಲ್ಲಿ ಭಾಗಿಯಾದವರನ್ನು ತಕ್ಷಣ ಬಂಧಿಸಿ ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದೆ.

ಬಜರಂಗಳ ದಕ್ಷಿಣಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಿಲಾದ್ ಮೆರವಣಿಗೆ ವೇಳೆ ಅಳವಡಿಸಿದ ಬೃಹತ್ ಕಟೌಟ್ಗಳನ್ನು ಪೊಲೀಸರು ತೆಗೆಸಿದ್ದಾರೆ. ಇದನ್ನು ನೆಪವಾಗಿಟ್ಟುಕೊಂಡು ಜಾಥಾ ವೇಳೆ ತಲವಾರು ಹಿಡಿದ ಸುಮಾರು 400ಕ್ಕೂ ಅಧಿಕ ಮಂದಿ ಗ್ರಾಮವೊಂದರ ಹಿಂದೂಗಳ ಮನೆಗಳಿಗೆ ನುಗ್ಗಿ ಹಿಂದೂಗಳ ಮೇಲೆ ಹಲ್ಲೆ ನಡೆಸಿರುವುದು ಸಹಿಸಲಸಾಧ್ಯ ಘಟನೆ ಎಂದ ಅವರು, ಖಂಡನೆ ವ್ಯಕ್ತಪಡಿಸಿದರು.

ತಕ್ಷಣ ಘಟನೆಯನ್ನು ಹೆಚ್ಚಿನ ತನಿಖೆಗಾಗಿ ರಾಷ್ಟ್ರೀಯ ತನಿಖಾ ತಂಡಕ್ಕೆ ಒಪ್ಪಿಸಿ, ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ವಿಧಿಸಬೇಕು. ಮುಂದೆ ಇಂತಹಾ ಘಟನೆ ನಡೆಯಬಾರದು. ಈ ವಿಚಾರದಲ್ಲಿ ಸರಕಾರ ತುಷ್ಠೀಕರಣ ಮಾಡಿದರೆ ಮುಂದೆ ಆಗಬಹುದಾದ ಅನಾಹುತಕ್ಕೆ ಸರಕಾರವೇ ಕಾರಣವಾಗಲಿದೆ ಎಂದು ಎಚ್ಚರಿಕೆ ನೀಡಿದರು.































 
 

ಶೌರ್ಯ ಜಾಗರಣ ರಥಯಾತ್ರೆ ಸ್ವಾಗತ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಬೊಟ್ಯಾಡಿ, ಕಾರ್ಯದರ್ಶಿ ವಿರೂಪಾಕ್ಷ ಭಟ್ ಮಚ್ಚಿಮಲೆ, ಸಂಚಾಲಕ ಕೃಷ್ಣಪ್ರಸಾದ್ ಬೆಟ್ಟ, ವಿಹಿಂಪ ಜಿಲ್ಲಾ ಸಹಸಂಚಾಲಕ ಶ್ರೀಧರ್ ತೆಂಕಿಲ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top