ಚಿಕ್ಕಮಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ್ ಮೋಹನ್ ಭಾಗವತ್ ಅವರು ಶೃಂಗೇರಿ ಶಾರದ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಶ್ರೀಗಳ ಆಶೀರ್ವಾದ ಪಡೆದರು.
ಗುರುವಾರ ಶಾರದ ದೇವಸ್ಥಾನಕ್ಕೆ ಭೇಟಿ ನೀಡಿದ ಮೋಹನ್ ಭಾಗವತ್ ಅವರು ಶಾರದ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಹಿರಿಯ ಶ್ರೀಗಳಾದ ಭಾರತೀತೀರ್ಥ ಶ್ರೀಗಳು ಹಾಗೂ ಕಿರಿಯ ಶ್ರೀ ವಿಧುಶೇಖರ ಸ್ವಾಮೀಜಿ ಅವರನ್ನು ಭೇಟಿ ಮಾಡಿ, ಸುಮಾರು ಒಂದೂವರೆ ಗಂಟೆಗಳ ಕಾಲ ಚರ್ಚಿಸಿದರು.
ಭಾಗವತ್ ಅವರ ಜತೆ ಐವರು ಸದಸ್ಯರು ಭಾಗಿಯಾಗಿದ್ದು, ರಾಮ ಮಂದಿರ ಉದ್ಘಾಟನೆಗೆ ಶ್ರೀಗಳನ್ನು ಆಹ್ವಾನ ನೀಡಲು ಬಂದಿರಬಹುದೆಂದು ವಿಶ್ಲೇಷಿಸಲಾಗುತ್ತಿದೆ.