ಬೆಂಗಳೂರು: ಹೊತ್ತಿ ಉರಿದ ಪಟಾಕಿ ಅಂಗಡಿಗಳು, 3 ಸಾವು

ಬೆಂಗಳೂರು: ಪಟಾಕಿ ಅನ್’ಲೋಡ್ ಮಾಡುತ್ತಿದ್ದ ವೇಳೆ ಪಟಾಕಿ ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡು, 3 ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ವರದಿಯಾಗಿದೆ.

ನವೀನ್ ಎಂಬುವವರಿಗೆ ಸೇರಿದ ಪಟಾಕಿ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದೆ. ಲಾರಿಯಿಂದ ಪಟಾಕಿ ಅನ್ ಲೋಡ್ ಮಾಡುವಾಗ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಈ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದ್ದು, 4-5 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಅಂಗಡಿಯ ಎದುರು ನಿಲ್ಲಿಸಿದ್ದ 3 ಬೈಕ್’ಗಳು ಸುಟ್ಟು ಕರಕಲಾಗಿವೆ. ಓರ್ವ ವ್ಯಕ್ತಿ ನಾಪತ್ತೆಯಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top