ಪುತ್ತೂರು ಮಾಯಿದೆ ದೇವುಸ್ ಚರ್ಚ್ ನಲ್ಲಿ ವಿದ್ಯಾರ್ಥಿ ಸಾಧಕರು, ಕ್ರೀಡಾ ಪ್ರತಿಭೆಗಳಿಗೆ ಪ್ರತಿಭಾ ಪುರಸ್ಕಾರ

ಪುತ್ತೂರು : ಡೊನ್ ಬೊಸ್ಕೊ ಕ್ಲಬ್ ವತಿಯಿಂದ ಪುತ್ತೂರಿನ ವಿದ್ಯಾರ್ಥಿ ಸಾಧಕರನ್ನು ಮತ್ತು ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ’ಪ್ರತಿಭಾ ಪುರಸ್ಕಾರ-೨೦೨೩’ ಕಾರ್ಯಕ್ರಮ ಭಾನುವಾರ ಮಾಯಿದೇ ದೇವುಸ್ ಚರ್ಚ್ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜನರ ಅಭಿವೃದ್ಧಿಗೆ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ನೀಡಿದೆ. ಜನರ ಕಣ್ಣೀರೊರೆಸುವ ಕಾರ್ಯ ನಮ್ಮಿಂದ ಹಾಗೂ ಸರಕಾರದಿಂದ ಆಗುತ್ತಿದೆ ಎಂದರು.

ಮಾಯಿದೆ ದೇವುಸ್ ಚರ್ಚ್‌ನ ಪ್ರಧಾನ ಧರ್ಮಗುರು ವಂ|ಲಾರೆನ್ಸ್ ಮಸ್ಕರೇನ್ಹಸ್ ಮಾತನಾಡಿ, ಜೀವನದಲ್ಲಿ ಸಾಧನೆ ಮಾಡಬೇಕಾದರೆ ಛಲವಿರಬೇಕು. ಮಕ್ಕಳ ಸಾಧನೆಯ ಹಿಂದೆ ಹೆತ್ತವರ ಪ್ರೀತಿ, ಪ್ರೇರಣೆ, ಸ್ಪೂರ್ತಿ ಹಾಗೂ ತ್ಯಾಗದ ಫಲವಿದೆ. ಪ್ರತಿಭೆಯನ್ನು ಸರಿಯಾದ ಸಮಯದಲ್ಲಿ ಪ್ರಚುರಪಡಿಸಿ ಸಮಾಜದಲ್ಲಿ ಬೆಳಗುವ ನಕ್ಷತ್ರಗಳನ್ನಾಗಿಸಬೇಕು ಎಂದರು.































 
 

ಸಮಾರಂಭದಲ್ಲಿ ಶಾಸಕ ಅಶೋಕ್ ಕುಮಾರ್ ರೈಯವರನ್ನು ಸನ್ಮಾನಿಸಲಾಯಿತು. ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಜೆರಾಲ್ಡ್ ಡಿ’ಕೋಸ್ಟ, ಡೊನ್ ಬೊಸ್ಕೊ ಕ್ಲಬ್ ಅಧ್ಯಕ್ಷ ಆಂಟನಿ ಒಲಿವೆರಾ, ಜೊತೆ ಕಾರ್ಯದರ್ಶಿ ಬ್ಯಾಪ್ಟಿಸ್ಟ್ ರೊಡ್ರಿಗಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top