ನವದೆಹಲಿ: ಪಂಚರಾಜ್ಯ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, ರಾಜಸ್ಥಾನ್, ಛತ್ತೀಸ್’ಗಡ, ಮದ್ಯಪ್ರದೇಶ, ತೆಲಂಗಾಣ, ಮಿಜೋರಾಂ ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ದಿನಾಂಕವನ್ನು ಪ್ರಕಟ ಮಾಡಲಾಗಿದೆ.
ಮಿಜೋರಾಂನಲ್ಲಿ ನವಂಬರ್ 7, ಮಧ್ಯಪ್ರದೇಶದಲ್ಲಿ ನವಂಬರ್ 17, ರಾಜಸ್ಥಾನದಲ್ಲಿ ನವಂಬರ್ 23, ತೆಲಂಗಾಣದಲ್ಲಿ ನವಂಬರ್ 30ರಂದು ಚುನಾವಣೆ ನಡೆಯಲಿದೆ. ಡಿ. 3ರಂದು ಪಂಚರಾಜ್ಯ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.
























