ಪುತ್ತೂರು: ವಿಜಯವಾಡದ ಗುಂಟೂರು – ನೂತಕ್ಕಿ ವಿಜ್ಞಾನ ವಿಹಾರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ಮಟ್ಟದ ಜ್ಞಾನ ವಿಜ್ಞಾನ ಮೇಳದ ಸ್ಪರ್ಧೆಗಳಲ್ಲಿ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
8ನೇ ತರಗತಿಯ ಶಮನ್ ಎನ್. ತ್ಯಾಜ್ಯ ನಿರ್ವಹಣಾ ವಿಜ್ಞಾನ ಮಾದರಿಯಲ್ಲಿ ಪ್ರಥಮ, ಕುಮಾರಿ ಪ್ರೀತಿ ಪ್ರಭು ಗಣಿತ ಪ್ರಯೋಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಈ ಮೂಲಕ ಪಂಜಾಬಿನ ಅಮೃತಸರ ಮತ್ತು ಉತ್ತರಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯ ಶಿಕ್ಷಕರು ತಿಳಿಸಿದ್ದಾರೆ.