ಉಡುಪಿ: ಪ್ರಸ್ತುತ ಇಸ್ರೇಲ್ ದೇಶದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಸ್ರೇಲ್ ದೇಶಕ್ಕೆ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ಭಾರತದಿಂದ ತೆರಳಿರುವ ಉಡುಪಿ ಜಿಲ್ಲೆಗೆ ಸಂಬಂಧಿಸಿದ ಭಾರತ ಪ್ರಜೆಗಳಿದ್ದಲ್ಲಿ ತಕ್ಷಣ ಉಡುಪಿ ಕಂಟ್ರೋಲ್ ರೂಂಗೆ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿಯನ್ನು ಉಡುಪಿ ಜಿಲ್ಲಾಧಿಕಾರಿಯವರ ಕಚೇರಿ, ರಜತಾದ್ರಿ ಮಣಿಪಾಲದಲ್ಲಿ ತೆರೆದಿರುವ ಕಂಟ್ರೋಲ್ ರೂಂ ಸಂಖ್ಯೆ : 1077/0820-2574802 ಗೆ ಕರೆ ಮಾಡಿ ಮಾಹಿತಿ ನೀಡವಂತೆ ತಿಳಿಸಿದೆ.
ಅಥವಾ ರಾಜ್ಯ ಸರಕಾರದ ತುರ್ತು ಸಂಖ್ಯೆ : 080-22340676, 080-22253707 ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.