ಬೆಂಗಳೂರು: ಕೊಡಗು ಹಾಗೂ ದಕ್ಷಿಣ ಕನ್ನಡ ಗೌಡ ಸಮಾಜದ 2023-25 ನೇ ಸಾಲಿನ ಅಧ್ಯಕ್ಷರಾಗಿ ರವೀಂದ್ರನಾಥ್ ಕೇವಳ ಹಾಗೂ ಉಪಾಧ್ಯಕ್ಷರಾಗಿ ಪಾಣತ್ತಲೆ ಪಳಂಗಪ್ಪಂನವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.
ಗೌರವ ಕಾರ್ಯದರ್ಶಿಗಳಾಗಿ ನಾಗೇಶ್ ಕುಮಾರ್ ಕಲ್ಲುಮುಟ್ಲು, ಖಜಾಂಜಿಯಾಗಿ ಕುಂಭಗೌಡನ ಸೋಮಣ್ಣ, ಜಂಟಿ ಕಾರ್ಯದರ್ಶಿಯಾಗಿ ನಾಗೇಶ್ ಬಂಟೋಡಿ ಉಳುವಾರನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
























