ವಿಟ್ಲ: ನಂದಿಕೂರಿನಿಂದ ಕಾಸರಗೋಡಿಗೆ ಹೋಗುವ 400 ಕೆ.ವಿ. ಹೈ ಟೆನ್ಶನ್ ಮಾರ್ಗವನ್ನು ಪುಣಚ ಗ್ರಾಮದ ಬೈರಿಕಟ್ಟೆಯಿಂದ ಕಾಮಗಾರಿ ಆರಂಭ ಮಾಡಲು ಯತ್ನಿಸಿದಾಗ ಪರಿಸರದ ರೈತರು ಪ್ರತಿಭಟಿಸಿದ ಘಟನೆ ಮಂಗಳವಾರ ನಡೆಯಿತು.
ತಕ್ಷಣ ಸ್ಥಳಕ್ಕಾಗಮಿಸಿದ ಮಾಜಿ ಶಾಸಕ ಸಂಜೀವ ಮಠಂದೂರು ಅವರು, ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ತಕ್ಷಣ ಕಾಮಗಾರಿ ನಿಲ್ಲಿಸುವಂತೆ ಸೂಚಿಸಿದರು. ಮಾತ್ರವಲ್ಲ, ರೈತರ ಸಭೆ ಕರೆದು ಮಾತುಕತೆ ನಡೆಸುವಂತೆ ತಿಳಿಸಿದರು. ಸ್ಪಂದಿಸಿದ ಜಿಲ್ಲಾಧಿಕಾರಿ, ಕಾಮಗಾರಿಯನ್ನು ತಕ್ಷಣ ನಿಲ್ಲಿಸುವಂತೆ ತಹಸೀಲ್ದಾರ್ ಸೂಚಿಸಿದರು.
ಪುತ್ತೂರು ಮಂಡಲ ಬಿಜೆಪಿ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್,ವಿಟ್ಲ ಬಿಜೆಪಿ ಪ್ರಮುಖರಾದ ಕರುಣಾಕರ ನಾಯ್ತೊಟ್ಟು, ಪುಣಚ ಗ್ರಾಮ ಪಂಚಾಯತ್ ಸದಸ್ಯರಾದ ಅಶೋಕ್ ಮೂಡಂಬೈಲು,ತೀರ್ಥರಾಮ್, ರೈತ ಮುಖಂಡರಾದ ಸಂಜೀವ ಗೌಡ ಮೊದಲಾದವರು ಉಪಸ್ಥಿತರಿದ್ದರು.
























