ಇನ್ನು ಮೊಬೈಲ್ ನೀಡಲಿದೆ ವಿಕೋಪಗಳ ಮುನ್ಸೂಚನೆ!!

ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಟೆಲಿಕಮ್ಯುನಿಕೇಶನ್ ಇಲಾಖೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದಲ್ಲಿ ಸಕಾಲಿಕ ಮುನ್ನೆಚ್ಚರಿಕೆ (ವಿಭಿನ್ನ ಧ್ವನಿ ಮತ್ತು ಕಂಪನ) ನೀಡಲು ಮುಂದಾಗಿದೆ. ಅದರ ಭಾಗವಾಗಿ ರಾಜ್ಯದಲ್ಲಿ ಅ. 12ರಂದು ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ.

ರಾಜ್ಯದಲ್ಲಿ ದೂರಸಂಪರ್ಕ ಇಲಾಖೆ (ಸಿ-ಡಾಟ್) ಸೆಲ್ ಬ್ರಾಡ್ ಕಾಸ್ಟಿಂಗ್ ಮೂಲಕ ಸ್ಮಾರ್ಟ್ಫೋನ್ ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ. ಈಗಾಗಲೇ ಮೊಬೈಲ್ ಬಳಕೆದಾರರಿಗೆ ಸಂದೇಶಗಳು ರವಾನೆಯಾಗಿದೆ. ಫೋನ್ ಜೋರಾಗಿ ಎಚ್ಚರಿಕೆಯ ರೀತಿಯ ಬೀಪ್ ಶಬ್ದದೊಂದಿಗೆ ಸಂದೇಶ ಫ್ಲಾಶ್ ಆಗಲಿದೆ. ಬಳಕೆದಾರರು ಸರಿ ಎಂದು ಒತ್ತುವವರೆಗೂ ಈ ಬೀಪ್ ಬರುತ್ತಲೇ ಇರುತ್ತದೆ. ಇದು ಎಚ್ಚರಿಕೆ ಸಂದೇಶವನ್ನು ಓದಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ. ಆ ಮೂಲಕ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷೆ ನಡೆಯಲಿದೆ.

ಸಂದೇಶದಲ್ಲಿ ದೂರಸಂಪರ್ಕ ಇಲಾಖೆಯ ಸೆಲ್ ಬ್ರಾಡ್ಕಾಸ್ಟಿಂಗ್ ಸಿಸ್ಟಮ್ ಮೂಲಕ ಕಳುಹಿಸಿದ ಸ್ಯಾಂಪಲ್ ಪರೀಕ್ಷಾ ಸಂದೇಶವಾಗಿದ್ದು, ಇದನ್ನು ನಿರ್ಲಕ್ಷಿಸಿ. ನೀವು ಯಾವುದೇ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ. ಈ ಸಂದೇಶವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರವು ಜಾರಿಗೆ ತರುತ್ತಿರುವ ಪ್ಯಾನ್ – ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷಿಸುವ ಸಲುವಾಗಿ ಕಳುಹಿಸಲಾಗಿದೆ. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸುವ ಮತ್ತು ತುರ್ತು ಸಂದರ್ಭಗಳಲ್ಲಿ ಸಮಯೋಚಿತ ಎಚ್ಚರಿಕೆಗಳನ್ನು ನೀಡುವ ಗುರಿಯನ್ನು ಹೊಂದಿದೆ ಎನ್ನುವುದಾಗಿ ಉಲ್ಲೇಖವಾಗಲಿದೆ.































 
 

ಪ್ರಯೋಜನ ಏನು?

ಭೂಕಂಪ, ಸುನಾಮಿ, ಅಗ್ನಿ ದುರಂತ ಮತ್ತು ಹಠಾತ್ ಪ್ರವಾಹ, ಯುದ್ಧಗಳಂತಹ ವಿಪತ್ತುಗಳ ಸಂದರ್ಭಗಳಲ್ಲಿ ವಿಪತ್ತು ನಿರ್ವಹಣ ಪ್ರಾಧಿಕಾರವನ್ನು ಸನ್ನದ್ಧರಾಗಿಸಲು ಹಾಗೂ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಈ ವ್ಯವಸ್ಥೆ ಸಹಕಾರ ನೀಡಲಿದೆ. ಮುಂದಿನ ದಿನದಲ್ಲಿ ವಿಕೋಪಗಳು ಸಂಭವಿಸಬಹುದಾದ ಸ್ಥಳಗಳಲ್ಲಿನ ಮೊಬೈಲ್ ಬಳಕೆದಾರರಿಗೆ ಈ ಫ್ಲಾಶ್ ಸಂದೇಶದ ಮೂಲಕ ಎಚ್ಚರಿಸಲಾಗುತ್ತದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top