ಉಳ್ಳಾಲ: ಮೀನಿನ ಲಾರಿಗೆ ಸ್ಕೂಟರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ರಾ.ಹೆ.66ರ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ.
ಮೂಲತಃ ಉಳ್ಳಾಲ ನಿವಾಸಿ, ಕೋಟೆಕಾರ್ನಲ್ಲಿ ನೆಲೆಸಿರುವ ಹನೀಫ್ ಎಂಬವರ ಪುತ್ರ ಅಝ್ವೀನ್ (21) ಮೃತಪಟ್ಟ ಸ್ಕೂಟರ್ ಸವಾರ.
ದಕ್ಕೆಗೆ ಮೀನುಗಾರಿಕೆಯ ಕೆಲಸಕ್ಕೆಂದು ಅಝ್ವೀನ್ ಬುಧವಾರ ಮುಂಜಾನೆ 3:30ರ ವೇಳೆಗೆ ತೊಕ್ಕೊಟ್ಟಿನಿಂದ ಮಂಗಳೂರು ಕಡೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಘಟನೆ ಸಂಭವಿಸಿದರ. ನೇತ್ರಾವತಿ ಸೇತುವೆಯಲ್ಲಿ ಮೀನಿನ ವಾಹನವೊಂದರ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂದಿನಿಂದ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಅಝ್ವೀನ್ ನಿಯಂತ್ರಣ ತಪ್ಪಿ ಮೀನು ಸಾಗಾಟದ ವಾಹನಕ್ಕೆ ಢಿಕ್ಕಿ ಹೊಡೆದಿದ್ದಾರೆ. ಗಂಭೀರ ಗಾಯಗೊಂಡಿದ್ದ ಅಝ್ವೀನ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಈ ಕುರಿತು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.