ಕಾರಿನ ಗಾಜು ಪುಡಿ ಮಾಡಿ ಕಳ್ಳತನ: ಬಂಧನ

ಸುಬ್ರಹ್ಮಣ್ಯ: ಕಾರಿನ ಗಾಜು ಒಡೆದು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ.
ಪ್ರಭಾಕರ ಹೊನ್ನವಳ್ಳಿ ಬಂಧಿತ ಆರೋಪಿ.

ಕಳ್ಳತನ ಬೆಳಕಿಗೆ ಬರುತ್ತಿದ್ದಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಕಾರ್ತಿಕ್ ಹಾಗೂ ಮುರಳೀಧರ ನಾಯಕ್, ಕರುಣಾಕರ, ಮಹೇಶ್, ಕುಮಾರ್, ಆನಂದ್, ವಿಠ್ಠಲ್ ಬಸವರಾಜ್, ರೋಹಿತ್, ಕೃಷ್ಣ ಸೇರಿದಂತೆ ಎರಡು ತಂಡವನ್ನು ರಚಿಸಿ ಪತ್ತೆಕಾರ್ಯದಲ್ಲಿ ತೊಡಗಿದ್ದರು. ಸುಬ್ರಹ್ಮಣ್ಯ ರೈಲ್ವೇ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದಿದ್ದ ಭಕ್ತಾಧಿಯೋರ್ವರ ಕಾರಿನ ಗಾಜು ಒಡೆದು ಕಳ್ಳತನ ನಡೆಸಲಾಗಿತ್ತು. ಕಾರಿನಲ್ಲಿ ಸುಬ್ರಹ್ಮಣ್ಯಕ್ಕೆ ಬಂದು ರಥ ಬೀದಿಯ ಪಕ್ಕದಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ಕಾರನ್ನು ನಿಲ್ಲಿಸಿ ದೇವಸ್ಥಾನಕ್ಕೆ ಹೋಗಿದ್ದರು. ಪೂಜಾ ಕಾರ್ಯಕ್ರಮ ಮುಗಿಸಿಕೊಂಡು ಕಾರಿನ ಬಳಿ ಬಂದು ನೋಡಿದಾಗ ಕಾರಿನ ಹಿಂಬದಿಯ ಗಾಜನ್ನು ಪುಡಿ ಮಾಡಿ ಕಾರಿನಲ್ಲಿದ್ದ ಎರಡು ಬ್ಯಾಗ್ ಗಳನ್ನು ಯಾರೋ ಕಳ್ಳರು ಕಳವು ಮಾಡಿರುವುದು ಬೆಳಕಿಗೆ ಬಂದಿತ್ತು. ಬ್ಯಾಗ್ನಲ್ಲಿ ಸುಮಾರು 14 ಗ್ರಾಂ ತೂಕದ ಚಿನ್ನದ ಬ್ರಾಸ್ ಲೈಟ್ ಹಾಗೂ ಆಧಾರ ಕಾರ್ಡ್, ಎಟಿಎಂ ಇತ್ತೆಂದು ಕಾರಿನ ಮಾಲಕ ಕೇರಳ ನಿವಾಸಿ ಸುಯಿಶ್ ಟಿ.ಸಿ ಎಂಬವರ ದೂರಿನಲ್ಲಿ ತಿಳಿಸಿದ್ದರು.
ಆರೋಪಿಯ ಮೇಲೆ ಹೊನ್ನವಳ್ಳಿ ಸೇರಿದಂತೆ ಬೇರೆ ಬೇರೆ ಠಾಣೆಗಳಲ್ಲಿ ಹಲವು ಪ್ರಕರಣಗಳಿದ್ದು ದೇವಸ್ಥಾನಗಳಿಗೆ ಹೋಗಿ ಯಾರು ಇಲ್ಲದ ಸಮಯ ನೋಡಿಕೊಂಡು ಲೋಹದಂತ ಆಯುಧಗಳನ್ನು ಬಳಸಿ ಕಾರಿನ ಗಾಜುಗಳನ್ನು ಪುಡಿ ಮಾಡಿ ಬೆಲೆಬಾಳುವ ವಸ್ತುಗಳನ್ನು ಕದಿಯೋ ಚಾಳಿ ಬೆಳೆಸಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.































 
 

ಇದೀಗ ಪೊಲೀಸ್ ಅಧಿಕಾರಿಗಳ ಈ ಕಾರ್ಯಾಚರಣೆ ಬಗ್ಗೆ ಸಾರ್ವಜನಿಕವಾಗಿ ಮೆಚ್ಚುಗೆ ವ್ಯಕ್ತವಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top