ಪೆರ್ನೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ವಲಯದ ಕೆದಿಲ ‘ಬಿ’ ಕಾರ್ಯಕ್ಷೇತ್ರದ ಶಬರಿ ಸ್ವ ಸಹಾಯ ಸಂಘದ ಸದಸ್ಯೆ ನಳಿನಿ ಅವರ ಪುತ್ರಿ ಕಾವ್ಯ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ಅವರಿಗೆ ಧರ್ಮಸ್ಥಳ ಕ್ಷೇತ್ರದಿಂದ ಮಂಜೂರಾದ 25000 ರೂ. ಕ್ರಿಟಿಕಲ್ ಇಲ್ನೆಸ್ ಫಂಡನ್ನು ಹಸ್ತಾಂತರಿಸಲಾಯಿತು.
ಯೋಜನಾಧಿಕಾರಿ ಚೆನ್ನಪ್ಪ ಗೌಡ ಅವರ ಶಿಫಾರಸ್ಸಿನ ಮೇರೆಗೆ ಪೆರ್ನೆ ವಲಯ ಮೇಲ್ವಿಚಾರಕಿ ಶಾರದ ವಿತರಿಸಿದರು.
ಈ ಸಂದರ್ಭದಲ್ಲಿ ಸೇವಾಪ್ರತಿನಿಧಿಗಳಾದ ಜಯಂತಿ, ಶಾರದ, ಒಕ್ಕೂಟದ ಅಧ್ಯಕ್ಷೆ ಮೀನಾಕ್ಷಿ, ಕೆದಿಲ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಗಿರೀಶ, ವೆಂಕಪ್ಪ, ಕುಶಾಲಪ್ಪ ಉಪಸ್ಥಿತರಿದ್ದರು.

























