ಪುತ್ತೂರು: ಇಲ್ಲಿನ ಅರಣ್ಯ ಇಲಾಖೆಯ ಕ್ಷೇಮಾಭಿವೃದ್ಧಿ ವಿಭಾಗದ ನೌಕರ ರಮೇಶ್ (54 ವ.) ಅ. 14ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.
ಕಳೆದ 10 ವರ್ಷಗಳಿಂದ ಪುತ್ತೂರು ಅರಣ್ಯ ಇಲಾಖೆಯ ಕ್ಷೇಮಾಭಿವೃದ್ದಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರು, ಮೂಲತಃ ಮಡಿಕೇರಿ ನಿವಾಸಿ. ಪುತ್ತೂರು ಅರಣ್ಯ ಇಲಾಖೆಯ ವಸತಿಗೃಹದಲ್ಲೇ ವಾಸ್ತವ್ಯ ಹೊಂದಿದ್ದರು.
ಅರಣ್ಯ ಇಲಾಖೆ ಅಧಿಕಾರಿಗಳು ಮೃತರ ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ. ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.