ಒಕ್ಕಲಿಗರ ಅವಹೇಳನ: ಕೆ.ಎಸ್. ಭಗವಾನ್ ಮನೆಗೆ ಮುತ್ತಿಗೆ!

ಮೈಸೂರು: ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಒಕ್ಕಲಿಗ ಸಂಘದ ಸದಸ್ಯರು ಶನಿವಾರ ವಿಚಾರವಾದಿ ಕೆ.ಎಸ್. ಭಗವಾನ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಘೋಷಣೆ ಕೂಗುತ್ತಾ ರಸ್ತೆಯಲ್ಲೇ ಧರಣಿ ಕುಳಿತರು. ಧರಣಿನಿರತರನ್ನು ಪೊಲೀಸರು ವಶಕ್ಕೆ ಪಡೆದರು.

ಮಹಿಷ ದಸರಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಭಗವಾನ್, “ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳು ಎಂದು ಕುವೆಂಪು ಹೇಳಿದ್ದರು” ಎಂದು ಹೇಳಿಕೆ ನೀಡಿದ್ದರು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top