ಉಪ್ಪಿನಂಗಡಿ: ತಾಲೂಕಿನ ಉಪ್ಪಿನಂಗಡಿಯ ಯುವಕನೋರ್ವ ಬೆಂಗಳೂರಿನಲ್ಲಿ ಅನಾರೋಗ್ಯದಿಂದ ಮೃತಪಟ್ಟ ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಉಪ್ಪಿನಂಗಡಿ ಮಠ ನಿವಾಸಿ ಹಂಝ ಎಂಬವರ ಪುತ್ರ ಅಜ್ಜದ್ (18) ಮೃತಪಟ್ಟ ಯುವಕ.
ಎರಡು ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ ಅಜ್ಜದ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.