ಬರೆಪ್ಪಾಡಿ ದೇಗುಲದ ನಿಧಿ ಸಂಚಯನ ಹಿನ್ನೆಲೆ: ಪ್ರತಿನಿಧಿಗಳ ಸಭೆ

ಕಾಣಿಯೂರು: ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ಮತ್ತು ಕೇಪುಳೇಶ್ವರ ದೇವಸ್ಥಾನದಲ್ಲಿ ನಿಧಿ ಸಂಚಯನದ ಕುರಿತು ಭಾನುವಾರ ಪ್ರತಿನಿಧಿಗಳ ಸಭೆ ನಡೆಯಿತು.

ದೇವಸ್ಥಾನದ ಜೀರ್ಣೋದ್ದಾರ ಪ್ರಯುಕ್ತ ಜ. 7ರಂದು ನಿಧಿ ಸಂಚಯನ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ತಾಲೂಕು, ವಲಯ ಹಾಗೂ ಗ್ರಾಮವಾರು ಪ್ರತಿನಿಧಿಗಳ ಸಭೆಯನ್ನು ನಡೆಸಿ, ಕಾರ್ಯಕ್ರಮದ ರೂಪುರೇಷೆ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ತಾಲೂಕು, ವಲಯ, ಗ್ರಾಮಾವಾರು ಪ್ರತಿನಿಧಿಗಳು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top