ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್’ನಲ್ಲಿ ಆಯೋಜಿಸಲಾಗಿರುವ ಕರ್ನಾಟಕ ಸಂಭ್ರಮ-50ರ ಲಾಂಛನವನ್ನು ಅನಾವರಣ ಮಾಡಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಾಂಛನ ಬಿಡುಗಡೆ ಮಾಡಿ, ಶುಭಹಾರೈಸಿದರು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ. ಎನ್.ಮಂಜುಳ, ನಿರ್ದೇಶಕಿ ಡಾ.ಕೆ. ಧಾರಣಣೀದೇವಿ ಮಾಲಗತ್ತಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
ಕರ್ನಾಟಕ ಸರ್ಕಾರ ಈಗಾಗಲೇ 2023-24ನೇ ಸಾಲಿನ ಬಜೆಟ್‌ನಲ್ಲಿ ‘ಕರ್ನಾಟಕ ಸಂಭ್ರಮ 50’ ‘ಹೆಸರಾಗಲಿ ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ವರ್ಷಪೂರ್ತಿ ಕಾರ್ಯಕ್ರಮಗಳನ್ನು ಆಯೋಜಿಸುವ ಘೋಷಣೆ ಮಾಡಿದೆ.