ಕಡಬ: ಕಡಬ ತಾಲೂಕಿನ ಕುಂತೂರು ಗ್ರಾಮದ ಸೀಮಾ ದೇವಸ್ಥಾನ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗುತ್ತಿದೆ.
ಮಹೋತ್ಸವದ ಅಂಗವಾಗಿ ಪ್ರತಿನಿತ್ಯ ಮಹಾಪೂಜೆ, ಗಣಪತಿ ಮಹಾಪೂಜೆ, ಅನ್ನಸಂತರ್ಪಣೆ ಜರಗುತ್ತಿದ್ದು, ಅ.24 ರ ತನಕ ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಭಜನೆ, ಯಕ್ಷಗಾನ, ಭಕ್ತಿ ಭಾವಗಾನ, ನೃತ್ಯ ವೈಭವ, ಯಕ್ಷಗಾನ ತಾಳಮದ್ದಳೆ, ನೃತ್ಯ ನಿನಾದ ಮುಂತಾದ ಕಾರ್ಯಕ್ರಮಗಳು ಅ.24 ರ ವರೆಗೆ ನಡೆಯಲಿದೆ.
ವಿಶೇಷವಾಗಿ ಅ.22 ರಂದು ಬೆಳಿಗ್ಗೆ 9 ಗಂಟೆಗೆ ಚಂಡಿಕಾ ಹೋಮ, ಅ.23 ರಂದು ಆಯುಧ ಪೂಜೆ, ಅ.24ರ ವಿಜಯದಶಮಿಯಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮದ ಬಳಿಕ ಅಕ್ಷರಾಭ್ಯಾಸ ಜರಗಲಿದೆ ಎಂದು ಶ್ರೀ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಾಮೋದರ ಗೌಡ ಕಕ್ವೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.