ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಮಗೆ ಪಾಠ ಕಲಿಸಿದೆ. ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು ದೆಹಲಿ ಮಾದರಿಯಲ್ಲಿ ರಾಜ್ಯದಲ್ಲೂ ಪಟಾಕಿ ಬ್ಯಾನ್ಗೆ ಚಿಂತನೆ ಮಾಡಲಾಗುವುದು. ಅತ್ತಿಬೆಲೆ ಪಟಾಕಿ ದುರಂತದಲ್ಲಿ 17 ಮಂದಿ ಸಾವು ವಿಷಾದನೀಯ. ಪಟಾಕಿ ಮಳಿಗೆಗೆ 2017ರಿಂದ 2022ರವರೆಗೆ ನೂತನ ಪರವಾನಗಿ ನವೀಕರಣ ನಡುವೆ ಫೇಕ್ ಲೈಸೆನ್ಸ್ ಸೃಷ್ಟಿ ಮಾಡಲಾಗಿದೆ. ಕೇವಲ 1 ಸಾವಿರ ಕೆಜಿ ಪಟಾಕಿ ಮಾರಾಟಕ್ಕೆ ಪರವಾನಗಿ ನೀಡಲಾಗಿದೆ. ಆದರೆ 50 ಟನ್ಗೂ ಅಧಿಕ ಪಟಾಕಿ ಅಕ್ರಮವಾಗಿ ದಾಸ್ತಾನು ಮಾಡಲಾಗಿತ್ತು ಎಂದು ವಿವರಿಸಿದರು.
ಅಕ್ರಮ ದಸ್ತಾನು ಪರಿಶೀಲನೆ ವೇಳೆ ತಹಶಿಲ್ದಾರ್ ಸೇರಿದಂತೆ ಕಂದಾಯ ಅಧಿಕಾರಿಗಳು, ಪೊಲೀಸ್, ಪೈರ್ ಮತ್ತು ಟ್ರಾನ್ಸ್ಪೋರ್ಟ್ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದು, ಗಡಿಯಲ್ಲಿ ಆರ್.ಟಿ.ಓ. ಅಧಿಕಾರಿಗಳು ಪರಿಶೀಲಿಸಿ ಕ್ರಮ ವಹಿಸಿಲ್ಲ. ಹಾಗಾಗಿ ತಹಶಿಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.