ಎಚ್.ಡಿ. ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ಕಟ್ಟಿದ ದೇವೇಗೌಡ!

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ.

ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ಈ ಘೋಷಣೆ ಹೊರಡಿಸಿದ್ದು, ಎಚ್.ಡಿ. ಕುಮಾರಸ್ವಾಮಿ ಅವರನ್ನು ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿ ಘೋಷಣೆ ಹೊರಡಿಸಿದ್ದಾರೆ. ಪಕ್ಷದ ಸಂವಿಧಾನದಂತೆ ಈ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ. ರಾಜ್ಯದ ಎಲ್ಲಾ ಘಟಕಗಳನ್ನು ವಿಸರ್ಜಿಸಲಾಗಿದೆ ಎಂದು ಹೇಳಿದ್ದಾರೆ.

ಸಿ.ಎಂ. ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲಾಗಿದೆಯೇ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಅಡ್ಡಾಡುತ್ತಿದೆ. ಆದರೆ ಸಿ.ಎಂ. ಇಬ್ರಾಹಿಂ ಅವರ ಬಗ್ಗೆ ಯಾವುದೇ ನಿರ್ಧಾರವನ್ನು ದೇವೇಗೌಡ ಅವರು ಪ್ರಕಟಿಸಿಲ್ಲ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top