ಮಂಗಳೂರು: ಮಂಗಳಾದೇವಿ ದೇವಸ್ಥಾನದ ಸುತ್ತ ಕೇಸರಿ ಧ್ವಜ ಅಳವಡಿಸಿದ್ದಕ್ಕಾಗಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್’ವೆಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಚಟುವಟಿಕೆಯಲ್ಲಿ ತೊಡಗಿರುವ ಆರೋಪದ ಮೇಲೆ ಮಂಗಳೂರು ನಗರ ಪೊಲೀಸರು ಶರಣ್ ಪಂಪ್’ವೆಲ್ ಹಾಗೂ ಇತರರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು ಮಂಗಳಾದೇವಿ ದೇವಸ್ಥಾನದ ಸುತ್ತಮುತ್ತಲಿನ ಹಿಂದೂಗಳು ನಡೆಸುತ್ತಿದ್ದ ಅಂಗಡಿಗಳ ಮೇಲೆ ಕೇಸರಿ ಧ್ವಜ ಅಳವಡಿಸಿದ್ದರು. ಈ ಕ್ರಮ ಧಾರ್ಮಿಕ ವೈಷಮ್ಯವನ್ನು ಕೆರಳಿಸುವ ಸಾಮರ್ಥ್ಯ ಹೊಂದಿವೆ ಎಂದು ಪೊಲೀಸ್ ಕಮೀಷನರ್ ತಿಳಿಸಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪಿಎಸ್‌ಐ ಮನೋಹರ್ ಪ್ರಸಾದ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.