ಪುತ್ತೂರು: ಆರು ದಿನಗಳಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾದಲ್ಲಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನಡೆಯುತ್ತಿರುವ ಪುತ್ತೂರು ಶಾರದೋತ್ಸವದ ಅಂಗವಾಗಿ ಶ್ರೀ ಶಾರದಾ ಮಾತೆಯ ವಿಗ್ರಹದ ಮೆರವಣಿಗೆಯೊಂದಿಗೆ ಪ್ರತಿಷ್ಠಾಪನೆ ಶುಕ್ರವಾರ ನಡೆಯಿತು.
ವಿವಿಧ ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶಾರದೋತ್ಸವ ವಿಜೃಂಭಣೆಯಿಂದ ಜರಗುತ್ತಿದ್ದು, ಶುಕ್ರವಾರ ಶ್ರೀ ಶಾರದಾ ಮಾತೆಯ ವಿಗ್ರಹವನ್ನು ಮೆರವಣಿಗೆ ಮೂಲಕ ಕರೆತಂದು ಪ್ರತಿಷ್ಠಾಪಿಸಲಾಯಿತು.
ಮಾಜಿ ಶಾಸಕ ಸಂಜೀವ ಮಠಂದೂರು ಪ್ರತಿಷ್ಠಾಪನೆ ಬಳಿಕ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉತ್ಸವ ಸಮಿತಿ ಅಧ್ಯಕ್ಷ ರಾಜೇಶ್ ಬನ್ನೂರು, ಕಾರ್ಯಾಧ್ಯಕ್ಷ ಮುರಳೀಕೃಷ್ಣ ಹಸಂತಡ್ಕ,, ಸಂಚಾಲಕ ಜಗನ್ನಿವಾಸ ರಾವ್ ಪಿ.ಜಿ., ಪ್ರಧಾನ ಕಾರ್ಯದರ್ಶಿ ಅಜಿತ್ ರೈ ಹೊಸಮನೆ, ಶೋಭಾಯಾತ್ರೆ ಸಂಚಾಲಕ ಸೀತಾರಾಮ ರೈ ಕೆದಂಬಾಡಿಗುತ್ತು, ಭಜನಾ ಮಂದಿರದ ಅಧ್ಯಕ್ಷ ಕೆ.ಸಾಯಿರಾಮ ರಾವ್, ಕಾರ್ಯದರ್ಶಿ ಜಯಂತ ಉರ್ಲಾಂಡಿ, ಕೋಶಾಧಿಕಾರಿ ತಾರನಾಥ ಎಚ್., ಆಡಳಿತ ಮಂಡಳಿ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.