ಪುತ್ತೂರು: ಬೆಂಗಳೂರು ಕಂಬಳ ಸಮಿತಿ ವತಿಯಿಂದ ರಾಜ್ಯ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ಹಾಗೂ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಗೋವಿಂದರಾಜ್ ಅವರನ್ನು ಭೇಟಿ ಮಾಡಿ ಕಂಬಳಕ್ಕೆ ಆಹ್ವಾನಿಸಲಾಯಿತು.
ಬೆಂಗಳೂರು ಕಂಬಳ ಕುರಿತು ರೂಪರೇಷೆಗಳ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಪುತ್ತೂರು ಶಾಸಕ, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ, ಕಾರ್ಯಾಧ್ಯಕ್ಷ ಗುರುಕಿರಣ್, ಉಪಾಧ್ಯಕ್ಷ ಬಿ.ಗುಣರಂಜನ್ ಶೆಟ್ಟಿ, ಪದಾಧಿಕಾರಿ ಉದಯ್ ಶೆಟ್ಟಿ ಉಪಸ್ಥಿತರಿದ್ದರು.