4 ಗ್ರಾಮಗಳಲ್ಲಿ ಲಘು ಭೂಕಂಪ!

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ನಾಲ್ಕು ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಸುಕಿನ ಜಾವ 2.50ಕ್ಕೆ ಭೂಮಿ ಕಂಪಿಸಿದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ. ಈ ಘಟನೆ ವಿಜಯದಶಮಿ ಹಬ್ಬದ ಸಂಭ್ರಮದಲ್ಲಿದ್ದ ಜನರಲ್ಲಿ ಆತಂಕ ಮೂಡಿಸಿದೆ. ನಿಲೋಗಲ್, ಹಟ್ಟಿ, ವೀರಾಪುರ ಹಾಗೂ ಗೆಜ್ಜಲಗಟ್ಟ ಗ್ರಾಮಗಳಲ್ಲಿ ಮಧ್ಯರಾತ್ರಿ ವೇಳೆಗೆ ಭೂಮಿ ಕಂಪಿಸಿದ ಅನುಭವವಾಗಿದೆ.

ಸದ್ಯ, ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿಲ್ಲ. ಈ ರೀತಿಯ ಲಘು ಭೂಕಂಪನದಿಂದ ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ತಿಳಿಸಿದೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top