ಚಂದ್ರಗ್ರಹಣ : ಕುಕ್ಕೆ ಕ್ಷೇತ್ರದಲ್ಲಿ ದರ್ಶನ ಸಮಯದಲ್ಲಿ ಬದಲಾವಣೆ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅ.28ರಂದು ಶನಿವಾರ ಚಂದ್ರಗ್ರಹಣ ಇರುವುದರಿಂದ ಶ್ರೀ ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ಭಕ್ತಾಧಿಗಳಿಗೆ ಶ್ರೀ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಅ.28ರಂದು ಶನಿವಾರ ರಾತ್ರಿ ಮಹಾಪೂಜೆ ಸಾಯಂಕಾಲ ಗಂಟೆ 6.30ಕ್ಕೆ ಮುಕ್ತಾಯಗೊಳ್ಳಲಿದೆ. ಆ ಬಳಿಕ ಶ್ರೀ ದೇವರ ದರುಶನಕ್ಕೆ ಅವಕಾಶ ಇರುವುದಿಲ್ಲ. ಅಲ್ಲದೆ ಈ ದಿನ ಸಾಯಂಕಾಲ ಸಂಜೆಯ ಆಶ್ಲೇಷ ಬಲಿ ಸೇವೆ ನೆರವೇರುವುದಿಲ್ಲ.

ರಾತ್ರಿ ಪ್ರಸಾದ ಬೋಜನ ಪ್ರಸಾದ ವಿತರಣೆ ಇರುವುದಿಲ್ಲ ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top