ಪುತ್ತೂರು: ಶ್ರೀ ರಾಧಾ ಸುರಭಿ ಗೋಮಂದಿರದಲ್ಲಿ ಅಷ್ಟೋತ್ತರ ಶತ ಶ್ರೀಮದ್ಭಾಗವತ ಕಥಾ ಪಾರಾಯಣ ಮಹಾಯಜ್ಞ ಹಾಗೂ ಗೋನವರಾತ್ರಿ ಉತ್ಸವ ನ.14 ರಿಂದ ಆರಂಭಗೊಂಡು ನ.22ರಂದು ಸಂಪನ್ನಗೊಳ್ಳಲಿದ್ದು, ಈ ಹಿನ್ನಲೆಯಲ್ಲಿ ಅಲ್ಲಿಂದ ಹೊರಟ ಗೋರಥ ಗುರುವಾರ ಸಂಜೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿತು.
ಈ ಸಂದರ್ಭದಲ್ಲಿ ಗೋರಥವನ್ನು ಸ್ವಾಗತಿಸಿದ ಬಳಿಕ, ಪುತ್ತೂರು ನಗರರ ಸಂಚಾರಕ್ಕೆ ತೆರಳಿತು.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗೋಪುರದ ಬಳಿ ಗೋಮಾತೆಗೆ ಆರತಿ ಬೆಳಗಲಾಯಿತು. ಬಳಿಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಬಿ.ಐತ್ತಪ್ಪ ನಾಯ್ಕ್ ತೆಂಗಿನಕಾಯಿ ಒಡೆಯುವ ಮೂಲಕ ಗೋರಥ ಸಂಚಾರಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ.ಕೃಷ್ಣಪ್ರಸನ್ನ, ಪ್ರಮುಖರಾದ ಸಂತೋಷ್ ಕೈಕಾರ, ಶ್ರೀಧರ ತೆಂಕಿಲ, ವಿಶಾಖ್ ರೈ, ಪುರುಷೋತ್ತಮ ಮುಂಗ್ಲಿಮನೆ, ನಿತೇಶ್ ಕುಮಾರ್ ಶಾಂತಿವನ, ಹರೀಶ್ ಬಿಜತ್ರೆ ಮತ್ತಿತರರು ಉಪಸ್ಥಿತರಿದ್ದರು.