ಅರಿಯಡ್ಕ:ನಿರ್ಮಾಣ ಹಂತದ ಮನೆಯ ಸಿಟೌಟ್‌ನ ಮೇಲ್ಬಾವಣಿ ಕುಸಿದ ಪರಿಣಾಮ ಕಾರ್ಮಿಕರೊಬ್ಬರು ಮೃತಪಟ್ಟು, ಗುತ್ತಿಗೆದಾರ ಗಂಭೀರ ಗಾಯಗೊಂಡಿರುವ ಘಟನೆ ಅರಿಯಡ್ಕ ಗ್ರಾಮದ ಪಾದಲಾಡಿ ಎಂಬಲ್ಲಿ ನಡೆದಿದೆ.
ಅರಿಯಡ್ಕ ಗ್ರಾಮದ ಕೌಡಿಚ್ಚಾರ್ ನಿವಾಸಿ ಶೇಖರ್ ಕುಲಾಲ್(45) ಮೃತಪಟ್ಟವರು. ಶೇಖರ್ ಕುಲಾಲ್ ಅರಿಯಡ್ಕ ಗ್ರಾಮದ ಪಾದಲಾಡಿ ಎಂಬಲ್ಲಿ ಕಮಲ ಎಂಬವರ ಮನೆಗೆ ಸೆಂಟ್ರಿಂಗ್ ಕೆಲಸಕ್ಕೆ ತೆರಳಿದ್ದರು. ಮನೆಯ ಸಿಟೌಟ್‌ನ ಮೇಲ್ಟಾವಣಿಯ ಸೆಂಟ್ರಿಂಗ್ ಕೆಲಸ ಮಾಡುತ್ತಿರುವ ಸಂದರ್ಭ ಮೇಲ್ಟಾವಣೆ ಕುಸಿದು ಬಿದ್ದು ಶೇಖರ್ ಕುಲಾಲ್ ಹಾಗೂ ಜೊತೆಗೆ ಕೆಲಸ ಮಾಡಿಕೊಂಡಿದ್ದ ಗುತ್ತಿಗೆದಾರ ಸಂಜೀವ ಮೊಗೇರ ಎಂಬವರು ಗಂಭೀರ ಗಾಯಗೊಂಡಿದ್ದರು. ಶೇಖರ್ ಕುಲಾಲ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿಮಧ್ಯೆ ಮೃತಪಟ್ಟಿದ್ದಾರೆ. ಸಂಜೀವ ಮೊಗೇರ ಅವರು ಮಂಗಳೂರು ವೆನ್‌ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಮೃತ ಶೇಖರ ಕುಲಾಲ್ ಅವರು ಪತ್ನಿ ಕುಸುಮಾವತಿ, ಪುತ್ರ ಧನ್ವಿತ್, ಸಹೋದರರು ಮತ್ತು ಸಹೋದರಿಯರನ್ನು ಅಗಲಿದ್ದಾರೆ.
ಸರಿಯಾಗಿ ಕ್ಯೂರಿಂಗ್ ಆಗದಿರುವ ಸ್ಥಳದಲ್ಲಿ ಕೆಲಸ ಮಾಡುವುದು ಜೀವಕ್ಕೆ ಅಪಾಯ ಎಂದು ತಿಳಿದಿದ್ದರೂ ಶೇಖರ್ ಕುಲಾಲ್‌ರವರನ್ನು ಕೆಲಸ ಮಾಡಿಸಿದ ಗುತ್ತಿಗೆದಾರ ಸಂಜೀವ ಮೊಗೇರ ಹಾಗೂ ಮನೆ ಮಾಲಕಿ ಕಮಲರವರ ವಿರುದ್ಧ ಮೃತ ಶೇಖರ್ ಕುಲಾಲ್ ಅವರ ಸಹೋದರ ದಿನೇಶ್ ಕುಲಾಲ್ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.