ಬಂಟ್ವಾಳ: ಹುಲಿ ವೇಷದ ತಂಡಗಳ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಮೂವರಿಗೆ ಚೂರಿ ಇರಿತವಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ.
ಬೋಳಂಗಡಿ ನಿವಾಸಿಗಳಾದ ದೇವದಾಸ್, ಸಂದೀಪ್, ಶಂಕರ್ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರು. ಶೋಧನ್, ಯತೀಶ್, ಚೇತನ್, ಪ್ರಸನ್ನ, ಪ್ರದೀಪ್ ಮತ್ತು ಪ್ರಕಾಶ್ ತಂಡದವರು ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.
ಮೆಲ್ಕಾರ್ ನಲ್ಲಿ ಎರಡು ತಂಡಗಳ ನಡುವೆ ಕೆಲ ದಿನಗಳ ಹಿಂದೆ ನಡೆದಿದ್ದ ಜಗಳ ನಡೆದಿತ್ತು. ನಿನ್ನೆ ತಂಡಗಳ ನಡುವೆ ಕಲಹ ಮುಂದುವರಿದು ಮೂವರ ಮೇಲೆ ಮತ್ತೊಂದು ತಂಡದ ಸದಸ್ಯರಿಂದ ಚೂರಿ ಇರಿತ ನಡೆಸಲಾಗಿದೆ. ಘಟನೆಯಿಂದ ಮೂವರು ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಬುಧವಾರ ರಾತ್ರಿ ಪಾಣೆಮಂಗಳೂರು ಶಾರದೋತ್ಸವ ಮೆರವಣಿಗೆ ವೇಳೆ ಗಲಾಟೆ ನಡೆದಿದೆ. ಕೆಲ ವರ್ಷಗಳ ಹಿಂದೆ ಜೊತೆಯಾಗಿ ಹುಲಿ ವೇಷ ಹಾಕುತ್ತಿದ್ದ ತಂಡ ಯಾವುದೋ ವಿಚಾರಕ್ಕೆ ಬೇರೆ ಬೇರೆಯಾಗಿದ್ದರು. ಇದೀಗ ಎರಡು ತಂಡಗಳಾಗಿ ಹುಲಿ ವೇಷ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದೆ.
ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
























