ಬೆಳ್ತಂಗಡಿ: ಬ್ಯಾನರ್ ವಿಚಾರದ ಹಿನ್ನಲೆಯಲ್ಲಿ ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಧರ್ಮಸ್ಥಳ ಗ್ರಾಮದ ಸಂದೀಪ್ ರೈ ಎಂಬವರು ತಿಮರೋಡಿ ಹಾಗೂ ಮತ್ತಿತರರ ವಿರುದ್ಧ ದೂರು ನೀಡಿದವರಾಗಿದ್ದಾರೆ.
ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್‌ಗಳ ಸಮೀಪದಲ್ಲೇ ಪಾದಯಾತ್ರೆಯನ್ನು ನಿಲ್ಲಿಸುವ ಒಳಸಂಚಿನಿಂದ ಪ್ರಾದೇಶಿಕ ಗುಂಪುಗಳ ನಡುವಣ ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್‌ಗಳನ್ನು ಅಳವಡಿಸಿ ಪ್ರಾದೇಶಿಕ ಗುಂಪುಗಳ ನಡುವೆ ವೈರತ್ವ ದ್ವೇಷ, ವೈಮನಸ್ಸು ಭಾವನೆಗಳನ್ನು ಬಿತ್ತಿಸಿ ಅಸೌಹಾರ್ದತೆಯನ್ನು ಸೃಷ್ಟಿಸಿರುವುದಾಗಿ ಸಂದೀಪ್ ರೈ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
























