ಉಜಿರೆ: ತಂದೆಯೇ ಮಗನನ್ನು ಕೊಲೆ ಮಾಡಿದ ಘಟನೆ ಭಾನುವಾರ ರಾತ್ರಿ ಉಜಿರೆಯಲ್ಲಿ ಸಂಭವಿಸಿದೆ.

ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಜಗದೀಶ್ (30) ಮೃತಪಟ್ಟವರು.
ಮೃತರ ತಂದೆ ಕೃಷ್ಣಯ್ಯಾಚಾರ್ ಎಂಬವರೇ ಕೊಲೆ ಮಾಡಿರುವುದಾಗಿ ಆರೋಪಿಸಲಾಗಿದೆ. ಭಾನುವಾರ ರಾತ್ರಿ ತಂದೆ ಹಾಗೂ ಮಗನ ನಡುವೆ ಮಾತಿನ ಜಗಳ ನಡೆದಿದೆ. ಇದಾದ ಬಳಿಕ ಕೃಷ್ಣಯ್ಯ ಆಚಾರ್ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿದ್ದಾರೆ. ಮಗ ಜಗದೀಶ ಬಾಗಿಲು ತೆಗೆಯಲು ಪ್ರಯತ್ನಿಸಿದಾಗ ಏಕಾಏಕಿ ಬಾಗಿಲು ತೆರೆದ ತಂದೆ ಕೃಷ್ಣಯ್ಯ ಆಚಾರ್ ಕೋಣೆಯ ಒಳಗಿನಿಂದ ಹೊರಬಂದು ಜಗದೀಶನಿಗೆ ಚೂರಿಯಿಂದ ಇರಿದಿದ್ದಾರೆ. ಇರಿತಕ್ಕೊಳಗಾಗಿ ಜಗದೀಶ್ ಕುಸಿದುಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಜಗದೀಶನ ಸಹೋದರ ಗಣೇಶ್ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಲಾಗಿದೆ