ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ | ವರದಕ್ಷಿಣೆ ಕಿರುಕುಳ ಆರೋಪ

ಬಂಟ್ವಾಳ: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನವವಿವಾಹಿತೆಯೋರ್ವರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ನೌಸೀನ್ (22) ಈ ಕೃತ್ಯ ಎಸಗಿದವರು. ಉಳ್ಳಾಲದ ಆಜ್ಮಾನ್ ಜತೆ ನೌಸೀನ್ ಅವರ ವಿವಾಹ ಮೂರು ತಿಂಗಳ ಹಿಂದೆ ನಡೆದಿತ್ತು. ಈ ಸಂದರ್ಭದಲ್ಲಿ ವರನಿಗೆ 18 ಪವನ್ ಚಿನ್ನ ವರದಕ್ಷಿಣೆ ರೂಪದಲ್ಲಿ ನೀಡಿದ್ದರು ಎನ್ನಲಾಗಿದೆ.

ತಂಗಿಯ ಸಾವಿಗೆ ಗಂಡನ ಮನೆಯವರ ವರದಕ್ಷಿಣೆ ಕಿರುಕುಳ ಕಾರಣ ಎಂದು ಮೃತ ನೌಸೀನ್‍ ಸಹೋದರ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top