ಅಡಿಕೆ ಕಳ್ಳತನ : ನಾಲ್ವರು ಆರೋಪಿಗಳ ಬಂಧನ | ಸೊತ್ತುಗಳು ವಶಕ್ಕೆ

ಪುತ್ತೂರು: ಅಡಿಕೆ ಕಳ್ಳತನ ಮಾಡಿದ ನಾಲ್ವರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿ ಅಡಿಕೆ ಹಾಗೂ ಕಳ್ಳತನಕ್ಕೆ ಬಳಸಿದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಬಡಗನ್ನೂರಿನ ಕೊಯ್ದ ಮನೆ ಶ್ರವಣ್ ಕೆ (20), ಬಾಣಪದವು ಜಯಚಂದ್ರ (21), ನಿಡ್ನಳ್ಳಿ ಡೊಬ್ಬಟ್ಟಗಿರಿಯ ಅಶೋಕ (24), ನಿಡ್ನಳ್ಳಿ ಕಲ್ಲಮೂಲೆಯ ಪುನೀತ್ (20) ಎಂದು ಬಂಧಿತ ಆರೋಪಿಗಳು.

ಬಂಧಿತರಿಂದ 1,55,925/- ರೂ. ಮೌಲ್ಯದ ಅಡಿಕೆ, ಕಳವು ಮಾಡಲು ಉಪಯೋಗಿಸಿದ ಸ್ವಿಪ್ಟ್ ಕಾರು, ಮತ್ತು ಆಟೋ ರಿಕ್ಷಾ ಸೇರಿದಂತೆ ಒಟ್ಟು 4,15,925/- ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.































 
 

ಬಡಗನ್ನೂರು ಗ್ರಾಮದ ಕೊಯ್ದ ನವೀನ್ ಕುಮಾರ್ ರೈ ಎಂಬವರಿಗೆ ಸೇರಿದ ಹಳೇ ಮನೆಯ ಕೊಟ್ಟಿಗೆಯ ಅಟ್ಟದಲ್ಲಿ ಎನ್ ಕೆ ಆರ್ ಎಂದು ಮಾರ್ಕ್ ಮಾಡಿ ಇಟ್ಟಿದ್ದ ಸುಮಾರು 23 ಗೋಣಿ ಸುಲಿಯದ ಅಡಿಕೆಯನ್ನು ಕಳವು ಮಾಡಲಾಗಿದ್ದು, ಈ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಖಚಿತ ಮಾಹಿತಿಯ ಮೇರೆಗೆ ಆರೋಪಿಗಳನ್ನು ಪತ್ತೆ ಹಚ್ಚಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಪ್ರಕರಣವನ್ನು ಬೇಧಿಸುವಲ್ಲಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ ರಿಷ್ಯತ್ ಮತ್ತು ದ.ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ ಎಮ್ ಎನ್ ಅವರ ನಿರ್ದೇಶನದಲ್ಲಿ ಪುತ್ತೂರು ಉಪಾಧೀಕ್ಷಕಿ ಡಾ.ಗಾನ ಪಿ. ಕುಮಾರ್ ಅವರ ಮಾರ್ಗದರ್ಶನದಲ್ಲಿ, ಪುತ್ತೂರು ಗ್ರಾಮಾಂತರ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕ ರವಿ.ಬಿ.ಎಸ್, ರವರ ಆದೇಶದಂತೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪ ನಿರೀಕ್ಷಕ ಧನಂಜಯ ಬಿ.ಸಿ ರವರ ನೇತೃತ್ವದಲ್ಲಿ ಎಎಸ್‌ಐ ಮುರುಗೇಶ್, ಸಿಬ್ಬಂದಿಗಳಾದ ಬಾಲಕೃಷ್ಣ, ಅದ್ರಾಮ, ಪ್ರವೀಣ್ ರೈ, ಹರೀಶ್ ಗೌಡ, ದಯಾನಂದ, ಸುಂದರ್, ವೆಂಕಪ್ಪ, ಸಲೀಂ, ನಾಗೇಶ್ ಕೆ ಸಿ, ಮುನಿಯ ನಾಯ್ಕ ಕಾರ್ತಿಕ್, ಯುವರಾಜ ನಾಯ್ಕ, ಚಾಲಕ ಯೋಗೀಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top