ಉತ್ತರ ಪ್ರದೇಶ: ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಹರ್ದೋಯ್’ನ ಸವಯಜ್ ಪುರ ಕೊಟ್ಟಾಲಿ ಪ್ರದೇಶದ ಬಿಲ್ ಹೌರ್-ಕತ್ರಾ ರಸ್ತೆಯ ಖಮಾರಿಯಾ ತಿರುವಿನ ಬಳಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಮೃತರು ಪಚ್ ದೇವ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಬರಕಾಂತ್ ಗ್ರಾಮದವರಾಗಿದ್ದು, ಒಂದೇ ಕುಟುಂಬದವರು ಎನ್ನಲಾಗಿದೆ.
ಅಪಘಾತದ ಮಾಹಿತಿ ತಿಳಿದ ತಕ್ಷಣ ಎಸ್ಪಿ, ಎಎಸ್ಪಿ ಹಾಗೂ ಹಲವು ಠಾಣೆಗಳ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಕಾರಿನಲ್ಲಿ ಪತ್ತೆಯಾದ ಮೊಬೈಲ್ ಫೋನ್ ಸಹಾಯದಿಂದ ಕುಟುಂಬ ಸದಸ್ಯರಿಗೆ ಅಪಘಾತದ ಬಗ್ಗೆ ಮಾಹಿತಿ ನೀಡಲಾಗಿದೆ. ರಾತ್ರಿ 10 ಗಂಟೆ ಸುಮಾರಿಗೆ ಖಮಾರಿಯಾ ತಿರುವಿನಲ್ಲಿ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.