ಕಾರ್ಕಳ: ತಾಲೂಕಿನ ಅಜೆಕಾರು ನಿವಾಸಿ ಲೇಖಕ, ಸಾಹಿತಿ, ಪತ್ರಕರ್ತ ಶೇಖರ್ ಅಜೆಕಾರು (54) ಹೃದಯಾಘಾತದಿಂದ ನಿಧನರಾದರು.
ಶೇಖರ್ ಅಜೆಕಾರ್ ಅವರು ಮಕ್ಕಳ ಸಾಹಿತ್ಯದ ಕುರಿತು ಹೆಚ್ಚು ಆಸಕ್ತಿ ವಹಿಸಿದ್ದು, ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದರು.
ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.