ಮಡಿಕೇರಿ: ಕಟ್ಟಡ ಕಾಮಗಾರಿ ಹಿನ್ನಲೆಯಲ್ಲಿ ಮಣ್ಣು ತೆಗೆಯುವ ಕೆಲಸ ಮಾಡುತ್ತಿದ್ದ ವೇಳೆ ಬರೆ ಕುಸಿದು ಮೂವರು ಮಣ್ಣಿನ ಅಡಿಯಲ್ಲಿ ಸಿಲುಕಿ ಮೃತಪಟ್ಟ ಘಟನೆ ಮಂಗಳವಾರ ಮಡಿಕೇರಿಯ ಸ್ಟೀವರ್ಟ್ ಹಿಲ್ ಬಳಿ ನಡೆದಿದೆ.
ಮಣ್ಣಿನಡಿಯಲ್ಲಿ ಸಿಲುಕಿದ್ದ ಕಾರ್ಮಿಕರನ್ನು ಬಸವ, ಲಿಂಗಪ್ಪ, ಆನಂದ ಎಂದು ಗುರುತಿಸಲಾಗಿದೆ.
ಮಣ್ಣಿನಡಿಯಲ್ಲಿ ಸಿಲುಕಿದ್ದ ಓರ್ವನ ಮೃತದೇಹ ಪತ್ತೆಯಾಗಿದ್ದು ಮತ್ತಿಬ್ಬರಿಗಾಗಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯರಿಂದ ಶೋಧ ಕಾರ್ಯಾ ಮುಂದುವರಿದಿದೆ ಎಂದು ತಿಳಿದು ಬಂದಿದೆ.