ಸುಬ್ರಹ್ಮಣ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆಟೋ ಚಾಲಕನೊಬ್ಬನ ಮೇಲೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಯ ತಾಲೂಕಿನ ಬೆಳ್ಳಾರೆಯ ಆಟೋ ಚಾಲಕ ಮಹೇಶ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿರುವುದು. ಈತ ಪಂಜದ ಪಿಯುಸಿ ವಿದ್ಯಾರ್ಥಿನಿಯೋರ್ವಳನ್ನು ಪ್ರೀತಿಸುವ ನಾಟಕವಾಡಿ ಪುಸಲಾಯಿಸಿ ಲಾಡ್ಜ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ಬಳಿಕ ವಂಚಿಸಿದ್ದಾನೆ ಎಂದು ಪೋಷಕರು ಆರೋಪಿಸಿದ್ದರು. ಈ ಕುರಿತು ಠಾಣೆಗೆ ದೂರು ನೀಡಿದ್ದರು.
ಇದೀಗ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.