ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗವು ‘ಗೃಹ ‘ಟೆಕ್ನಿಕಲ್ ಎಕ್ಸ್ಪೋ’ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಆಯೋಜಿಸಿತ್ತು.
ಮುಖ್ಯ ಅತಿಥಿಯಾಗಿ ಇಂಜಿನಿಯರ್ ವಿಜಯ ವಿಷ್ಣು ಮಯ್ಯ ಮಾತನಾಡಿ, ಭವಿಷ್ಯದ ಸಿವಿಲ್ ಇಂಜಿನಿಯರಿಂಗ್ ಕ್ಷೇತ್ರದ ಅವಶ್ಯಕತೆಯನ್ನು ಹಾಗೂ ಯುವ ಎಂಜಿನೀಯರುಗಳಿಗೆ ಶಿಸ್ತು ಮತ್ತು ಕೌಶಲ್ಯಗಳ ಅಗತ್ಯತೆಯನ್ನು ವಿವರಿಸಿದರು .
ಇನ್ನೋರ್ವ ಅತಿಥಿಯಾಗಿ ಕಾಂತಾರ ಖ್ಯಾತಿಯ ನಟ ದೀಪಕ್ ರೈ ಪಾಣಾಜೆ, ಇಂಜಿನಿಯರ್ ಜಗದೀಶ್ ಪ್ರಸಾದ್ ಯುವ ಇಂಜಿನಿಯರ್ ಗಳಿಗೆ ಶುಭಹಾರೈಸಿದರು.
ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ ಸತೀಶ್ ಚಂದ್ರ ಎಸ್. ಮಾತನಾಡಿ, ದೇಶದ ಅಭಿವೃದ್ಧಿಗೆ ಸಿವಿಲ್ ಇಂಜಿನಿಯರ್ ಕ್ಷೇತ್ರದ ಮಹತ್ವವನ್ನು ತಿಳಿಸಿಕೊಟ್ಟರು.
ಕಾಲೇಜಿನ ಪ್ರಾಂಶುಪಾಲ ಸಂತೋಷ ಅಧ್ಯಕ್ಷತೆ ವಹಿಸಿದ್ದರು..ಉಪನ್ಯಾಸಕ ಸಂಪತ್ ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ವಿಭಾಗ ಮುಖ್ಯಸ್ಥೆತೃಪ್ತಿ ಆರ್.ರೈ ವಂದಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಅಭಿವೃದ್ಧಿ ಪಡಿಸಿದ ವಿವಿಧ ತಾಂತ್ರಿಕ ಮಾದರಿಗಳು ಮತ್ತು ಸಿವಿಲ್ ಇಂಜಿನಿಯರಿಂಗ್ ಕ್ಷೇತ್ರದ ವಿವಿಧ ವಸ್ತುಗಳನ್ನು ಪ್ರದರ್ಶಿಸಲಾಯಿತು. ಸ್ಥಳೀಯ ಸುಮಾರು 15೦೦ಕ್ಕೂ ಹೆಚ್ಚು ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿ ಪಡೆದುಕೊಂಡರು.