ಪುತ್ತೂರು: ನರಿಮೊಗರು ಸರಸ್ವತಿ ವಿದ್ಯಾ ಮಂದಿರದಲ್ಲಿ ಕನ್ನಡ ರಾಜ್ಯೋತ್ಸವವನ್ನು ಬುಧವಾರ ಆಚರಿಸಲಾಯಿತು.
ಶಾಲಾ ಸಂಚಾಲಕ ಅವಿನಾಶ್ ಕೊಡಂಕಿರಿ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.
ಶಾಲಾ ಆಡಳಿತಾಧಿಕಾರಿ ಶುಭಾ ಅವಿನಾಶ್ ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಷಾರ್ಚನೆಗೈದರು. ಬಳಿಕ ವಿದ್ಯಾರ್ಥಿಗಳಿಂದ ಗೀತ ಗಾಯನ ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು, ಶಿಕ್ಷಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
























