ಮಾಣಿ- ಸಂಪಾಜೆ ಚತುಷ್ಪಥ ರಸ್ತೆ ಕಾಮಗಾರಿಗೆ ಶೀಘ್ರವೇ ಕೇಂದ್ರದ ಅಸ್ತು | 2200 ಕೋಟಿ ರೂ ಪ್ರಸ್ತಾವನೆ ಸಲ್ಲಿಕೆ- ಶಾಸಕ ಅಶೋಕ್ ರೈ

ಪುತ್ತೂರು: ಮಾಣಿ-ಸಂಪಾಜೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ೨೨೦೦ ಕೋಟಿ ರೂ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು ಮುಂದಿನ ನಾಲ್ಕು ವರ್ಷದೊಳಗೆ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳಲಿದ್ದು ಈ ಭಾಗದ ಜನತೆಯ ಬಹುವರ್ಷಗಳ ಕನಸು ನನಸಾಗುವ ಕಾಲ ಬಂದಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಮಾಣಿಯಿಂದ ಸಂಪಾಜೆ ತನಕ 76 ಕಿ ಮೀ ರಸ್ತೆಯು ಮುಂದಿನ ದಿನಗಳಲ್ಲಿ ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಲಿದೆ. 76 ಕಿ ಮಿ ರಸ್ತೆ ಕಾಮಗಾರಿಗೆ ಮೊದಲ ಹಂತದಲ್ಲಿ 1100  ಕೋಟಿ ರೂ ಮತ್ತು ಎರಡನೇ ಹಂತದಲ್ಲಿ 1100 ಕೋಟಿ ರೂ ಒಟ್ಟು 2200 ಕೋಟಿ ರೂ ಗಳ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ.

ಕಳೇದ ಕೆಲದಿನಗಳ ಹಿಂದೆ ಚತುಷ್ಪಥ ರಸ್ತೆ ಕಾಮಗಾರಿ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಗೆ ಭೇಟಿ ನೀಡಿ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಹಾಗೂ ಮಂಗಳೂರು ಸಂಸದ ನಳಿನ್‌ಕುಮಾರ್ ಕಟೀಲ್ ಮಾತುಕತೆ ನಡೆಸಿದ್ದರು. ಮಾತುಕತೆ ವೇಳೆ ಮಾಣಿಯಿಂದ ಪುತ್ತೂರು ವರೆಗೆ ಚತುಷ್ಪಥ ರಸ್ತೆ ಕಾಮಗಾರಿಯ ವಿಚಾರವೂ ಚರ್ಚೆಯಾಗಿತ್ತು. ಆ ಬಳಿಕ ಕೇಂದ್ರ ಹೆದ್ದಾರಿ ಪ್ರಾಧಿಕಾರ ರೀಜನಲ್ ಮೆನೆಜರ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಶಾಸಕರು ಮತ್ತು ಸಂಸದರು ಚರ್ಚೆ ನಡೆಸಿದ್ದರು. ಇದೀಗ ಮಾಣಿಯಿಂದ ಸಂಪಾಜೆ ತನಕ ಚತುಷ್ಪಥ ಕಾಮಗಾರಿಗೆ ಹೆದ್ದಾರಿ ಪ್ರಾಧಿಕಾರ ಒಪ್ಪಿಕೊಂಡಿದ್ದು ಇದಕ್ಕೆ ಬೇಕಾದ ಎಲ್ಲಾ ಯೋಜನಾ ವರದಿಯನ್ನು ಸಿದ್ದಪಡಿಸಿಕೊಳ್ಳಲು ಮುಂದಾಗಿದೆ.



































 
 

ಮಾಣಿಯಿಂದ ಸಂಪಾಜೆ ತನಕ ಭೂ ಒತ್ತುವರಿ ಪ್ರಕ್ರಿಯೆ, ಸೇತುವೆ ಕಾಮಗಾರಿ ಸೇರಿದಂತೆ ರಸ್ತೆ ಅಗಲೀಕರಣಕ್ಕೆ ಬೇಕಾದ ಎಲ್ಲಾ ಯೋಜನೆಗಳನ್ನು ಸಿದ್ದಪಡಿಸಲಾಗುತ್ತಿದ್ದು ಮುಂದಿನ ನಾಲ್ಕು ತಿಂಗಳೊಳಗೆ ಈ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಳ್ಳಲಿದೆ. ಬಳಿಕ ಟೆಂಡರ್ ಪ್ರಕ್ರಿಯೆ ನಡೆಯಲಿದೆ. ಮುಂದಿನ ನಾಲ್ಕು ವರ್ಷದೊಳಗೆ ಈ ಕಾಮಗಾರಿ ಪೂರ್ಣಗೊಳ್ಳಲಿದ್ದು ಮಾಣಿಯಿಂದ ಸಂಪಾಜೆ ತನಕ ಪೂರ್ಣ ಪ್ರಮಾಣದ ಚತುಷ್ಪಥ ರಸ್ತೆ ನಿರ್ಮಾಣವಾಗಲಿದೆ.

2 ಫೈಓವರ್ 1 ಅಂಡರ್‌ಪಾಸ್:

ಬೈಪಾಸ್ ಹಾಗೂ ದರ್ಬೆಯ ಬಳಿ ಫ್ಲೈ ಓವರ್ ನಿರ್ಮಾಣವಾಗಲಿದೆ ಮತ್ತು ವಿವೇಕಾನಂದ ವಿದ್ಯಾ ಸಂಸ್ಥೆಯ ಬಳಿ ಅಂಡರ್‌ಪಾಸ್ ನಿರ್ಮಾಣವಾಗಲಿದೆ. ವಿದ್ಯಾರ್ಥಿಗಳ ಹಿತ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಅಂಡರ್‌ಪಾಸ್ ನಿರ್ಮಾಣ ಮಾಡಲಾಗುತ್ತದೆ. ಉಳಿದಂತೆ ಮಾಣಿಯಿಂದ ಸಂಪಾಜೆ ತನಕ ಅಗತ್ಯ ಇರುವ ಕಡೆಗಳಲ್ಲಿ ಫ್ಲೈ ಓವರ್ ಮತ್ತು ಅಂಡರ್ ಪಾಸ್ ಕಾಮಗಾರಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top