ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ರಾಜೀವಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕರಿಗೆ ಮನವಿ

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯಲ್ಲಿ ವಿವಿಧ ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳ ಸಹಾಯಧನವನ್ನು ನಿಗಮದಿಂದ ತಡೆಹಿಡಿಯಲಾಗಿದ್ದು, ಸಮಸ್ಯೆ ಬಗೆಹರಿಸಿ ಅನುದಾನ ಬಿಡುಗಡೆಗೊಳಿಸುವಂತೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ರಾಜೀವಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ವ್ಯವಸ್ಥಾಪಕರನ್ನು ಭೇಟಿ ಮಾಡಿದ ಅವರು, ಈ ಕುರಿತು ಸಮಸ್ಯೆ ಬಗೆಹರಿಸಿ ಅನುದಾನ ಬಿಡುಗಡೆಗೊಳಿಸುವಂತೆ ಹಲವಾರು ಬಾರಿ ಮನವಿ ಮಾಡಲಾಗಿದೆ. ಆದರೂ ತಾಂತ್ರಿಕ ಕಾರಣಗಳಿಂದಾಗಿ ನಿಗಮದ ವತಿಯಿಂದ ಸಮಸ್ಯೆ ಈ ವರೆಗೂ ಬಗೆಹರಿದಿಲ್ಲ. ಪರಿಣಾಮ ಫಲಾನುಭವಿಗಳಿಗೆ ಸಮಸ್ಯೆ ಉಂಟಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಶೀಘ್ರ ಸಮಸ್ಯೆ ಬಗೆಹರಿಸುವಂತೆ ಅವರು ಮನವಿ ನೀಡಿ ವಿನಂತಿಸಿದ್ದಾರೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top