ಜಗಳ ತಾರಕಕ್ಕೇರಿ ವಿಷ ಸೇವಿಸಿದ ಗಂಡ-ಹೆಂಡತಿ :  ಹೆಂಡತಿ ಮೃತ್ಯು

ಕಡಬ: ಗಲಾಟೆ ಮಾಡಿಕೊಂಡ ಗಂಡ-ಹೆಂಡತಿ ಜಗಳ ವಿಪರೀತಕ್ಕೇರಿ ಕೊನೆಗೆ ಸಾವಿನಲ್ಲಿ ಅಂತ್ಯವಾದ ಘಟನೆ ಕಡಬ ತಾಲೂಕಿನ ಕುದ್ಮಾರು ಗ್ರಾಮದಲ್ಲಿ ಶನಿವಾರ ರಂದು ಸಂಜೆ ನಡೆದಿದೆ.

ಗಂಡ-ಹೆಂಡಿರ ಗಲಾಟೆಯಲ್ಲಿ ಹೆಂಡತಿ ಕುಸುಮ (39) ಮೃತಪಟ್ಟವರು.
ಕುಸುಮ ಮತ್ತು ಆಕೆಯ ಪತಿ ಸಂಜೀವರ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಅಂತೆಯೇ ಶನಿವಾರ ಕೂಡ ಮಾತಿಗೆ ಮಾತು ಬೆಳೆದಿದೆ. ಕೋಪದ ಭರದಲ್ಲಿ ಇಬ್ಬರು ಕೂಡ ವಿಷ ಸೇವಿಸಿದ್ದಾರೆ. ಈ ವಿಚಾರ ಸ್ಥಳೀಯರಿಗೆ ತಿಳಿದು ತಕ್ಷಣ ಅವರ ಸಂಬಂಧಿಕರಿಗೆ ವಿಚಾರವನ್ನು ತಿಳಿಸಿರುತ್ತಾರೆ. ಅವರು ಬಂದು ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸುವ ಪ್ರಯತ್ನದಲ್ಲಿದ್ದಾಗ ಕುಸುಮ ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಸಂಜೀವ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top