ಪುತ್ತೂರು: ಪಡ್ನೂರು ಹಿ.ಪ್ರಾ ಶಾಲಾ ಜನಾರ್ದನ ರಂಗ ಮಂದಿರದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಶ್ರೀ ಜನಾರ್ದನ ಯುವಕ ಮಂಡಲದ ಸುವರ್ಣ ಮಹೋತ್ಸವ ‘ಪಡ್ನೂರು ಉತ್ಸವ’ಕ್ಕೆ ಶನಿವಾರ ಚಾಲನೆ ನೀಡಲಾಯಿತು.
ಬೆಳಿಗ್ಗೆ ಗಣಹೋಮದೊಂದಿಗೆ ಸುವರ್ಣ ಸಂಭ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಭಾರತೆ ಮಾತೆಗೆ ದೀಪ ಬೆಳಗಿಸಿ, ಪುಷ್ಪಾರ್ಚನೆ ಸಲ್ಲಿಸಲಾಯಿತು.
ಸುವರ್ಣ ಮಹೋತ್ಸವದ ಅಂಗವಾಗಿ ಆಯೋಜಿಸಲಾದ ಉಚಿತ ವೈದ್ಯಕೀಯ ಶಿಬಿರವನ್ನು ಉದ್ಘಾಟಿಸಿದ ಡಾ.ಕೃಷ್ಣ ಪ್ರಸಾದ್ ಸರ್ಪಂಗಳ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಜನಾರ್ದನ ಯುವಕ ಮಂಡಲ ಹಲವು ಕಾರ್ಯಕ್ರಮಗಳ ಮೂಲಕ ಮೆಚ್ಚುಗೆ ಗಳಿಸಿರುವುದನ್ನು ಶ್ಲಾಘಿಸಿದರು. ಯುವಕ ಮಂಡಲದ ಸಮಾಜ ಮುಖಿ ಸೇವೆಯು ನಿರಂತರವಾಗಿ ಮುನ್ನಡೆಯಲಿ. ಜನರಿಗೆ ಇನ್ನಷ್ಟು ಸೇವೆಗಳು ದೊತೆಯುವಂತಾಗಲಿ ಎಂದರು.
ಮುಖ್ಯ ಅತಿಥಿಗಳಾಗಿ ಡಾ.ಸುರೇಶ್ ಪುತ್ತೂರಾಯ, ಪಡ್ನೂರು ಸಮುದಾಯ ಆರೋಗ್ಯ ಅಧಿಕಾರಿ ಸೌಮ್ಯ ಶುಭ ಹಾರೈಸಿದರು. ಡಾ.ಸಚಿನ್ ಶಂಕರ್ ಹಾರಕರೆ, ಬೇರಿಕೆ ಶ್ರೀ ಆಧಿಶಕ್ತಿ ಭಜನಾ ಮಂದಿರದ ಅಧ್ಯಕ್ಷ ಕೃಷ್ಣಪ್ಪ ಕುಲಾಲ್ ಬೇರಿಕೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಡ್ನೂರು ಒಕ್ಕೂಟದ ಅಧ್ಯಕ್ಷ ತಿಮ್ಮಪ್ಪ ಪಡ್ನೂರು, ನವೋದಯ ಒಕ್ಕೂಟದ ಅಧ್ಯಕ್ಷೆ ಚಂದ್ರಾವತಿ, ಪಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರಾಮಣ್ಣ ಗೌಡ ಪುಳು, ಶ್ರೀರಾಂ ಫ್ರೆಂಡ್ಸ್ ನ ಅಧ್ಯಕ್ಷ ಯತೀಶ್ ಪಂಜಿಗುಡ್ಡೆ, ಯರ್ಮುಂಜಪಳ್ಳ ಗೆಳೆಯರ ಬಳಗದ ಅಧ್ಯಕ್ಷ ಕುಶಲ ಗೌಡ, ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಜೊಯಿಷ ಯರ್ಮಂಜ, ವಿಶ್ವನಾಥ ಗೌಡ ಪಟ್ಟೆ, ಸುವರ್ಣ ಸಮಿತಿ ಅಧ್ಯಕ್ಷ ಪೂವಪ್ಪ ಗೌಡ ದೇಂತಡ್ಕ, ಕಾರ್ಯದರ್ಶಿ ಶ್ರೀಧರ ಕುಂಜಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುವರ್ಣ ಮಹೋತ್ಸವ ಸಮಿತಿ ಕೊಶಾಧಿಕಾರಿ ರಾಜೇಶ್ ಬೇರಿಕೆ ಸ್ವಾಗತಿಸಿದರು. ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಆಟಿಕ್ಕು ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ವಿಶ್ವಪ್ರಸಾದ್ ಸೇಡಿಯಾಪು ವಂದಿಸಿದರು.
ನೂರಾರು ಮಂದಿ ಗ್ರಾಮಸ್ಥರು ಶಿಬಿರದ ಪ್ರಯೋಜನ ಪಡೆದುಕೊಂಡರು. ಆರೋಗ್ಯ ತಪಾಸಣೆ ಹಾಗೂ ಔಷಧಿಯನ್ನು ಉಚಿತವಾಗಿ ನೀಡಲಾಯಿತು.
ಉಚಿತ ಆಧಾರ್ ನೋಂದಣಿ, ತಿದ್ದುಪಡಿ ಸೇವೆ ಒದಗಿಸಲಾಯಿತು. 10ಕ್ಕೂ ಅಧಿಕ ಬಾರಿ ರಕ್ತದಾನ ಮಾಡಿದ ದಾನಿಗಳಿಗೆ, ಕಬಡ್ಡಿ ಆಟಗಾರರು ಹಾಗೂ ನಾಟಕ ಕಲಾವಿದರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಸಭಾ ಕಾರ್ಯಕ್ರಮದ ಬಳಿಕ ಕಲ್ಜಿಗದ ಕಾಳಿ ಮಂತ್ರದೇವತೆ ಎಂಬ ಪೌರಾಣಿಕ ನಾಟಕ ನಡೆಯಿತು.