ಬೆಂಗಳೂರು: ಸರ್ಕಾರಿ ಕರ್ತವ್ಯದಲ್ಲಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ಅವರ ಕೊಲೆಗೆ ಸಂಬಂಧಪಟ್ಟಂತೆ ಇದೀಗ ಬಿಗ್ ಅಪ್ಡೇಟ್ ಸಿಕ್ಕಿದ್ದು, ಪ್ರತಿಮಾ ಅವರ ಹಿಂದಿನ ಕಾರು ಚಾಲಕನೊಬ್ಬ ಈ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಸುಬ್ರಮಣ್ಯ ಠಾಣೆಯ ಪೊಲೀಸ್ ಅಧಿಕಾರಿಗಳು ಕಾರು ಚಾಲಕ ಕಿರಣ್ ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಪ್ರತಿಮಾ ಅವರ ಕಾರು ಚಾಲಕನಾಗಿದ್ದ ಕಿರಣನೇ ಹತ್ಯೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ. ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಪ್ರತಿಮಾ ಮೇಲೆ ಸೇಡು ತೀರಿಸಿಕೊಳ್ಳಲು ಕೊಲೆ ಮಾಡಿರುವ ಶಂಕೆ ಹಿನ್ನೆಲೆಯಲ್ಲಿ ಕಿರಣ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕಳೆದ ಒಂದು ವಾರದ ಹಿಂದೆ ಕೆಲಸದಿಂದ ತೆಗೆದುಹಾಕಿದ್ದರಿಂದ ಕಿರಣ್ ಹಾಗೂ ಪ್ರತಿಮಾ ಮಧ್ಯೆ ಹಲವು ಭಿನ್ನಾಭಿಪ್ರಾಯಗಳು ಇದ್ದವು. ಹಾಗಾಗಿ ಆತನೇ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ.
ಕಳೆದ ಹಲವು ವರ್ಷಗಳಿಂದ ಕಿರಣ್ ಪ್ರತಿಮಾ ಅವರ ಕಾರ್ ಚಾಲಕನಾಗಿದ್ದ ಎನ್ನಲಾಗಿದೆ. ಸದ್ಯ ಕಾನೂನು ಪ್ರಕ್ರಿಯೆ ಮುಗಿದ ಬಳಿಕ ಕಿರಣನನ್ನು ಬಂಧಿಸುವ ಸಾಧ್ಯತೆ ಇದ್ದು ವಿಚಾರಣೆ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.