ಕಡಬ: ತಿಂಗಳ ಹಿಂದೆ ಆನೆ ತುಳಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಗೇರ್ತಿಲ ನಿವಾಸಿ ಚೋಮ ಮಂಗಳವಾರ ಮೃತಪಟ್ಟಿದ್ದಾರೆ.
ಕಡಬ ತಾಲೂಕಿನ ಐತ್ತೂರು ಕೊಣಾಜೆ ಸಮೀಪ ಚೋಮ ಅವರು ನಡೆದುಕೊಂಡು ಹೋಗುತ್ತಿದ್ದಾಗ ಆನೆ ದಾಳಿ ಮಾಡಿತ್ತು.
ಗಂಭಿರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಮನೆಗೆ ಕರೆದುಕೊಂಡು ಬಂದಿದ್ದರು. ಇಂದು ಬೆಳಿಗ್ಗೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
























