ಹೃದಯಾಘಾತದಿಂದ ನವವಿವಾಹಿತೆ ಪುಷ್ಪಾ ಮೃತ್ಯು

ಪುತ್ತೂರು: ನವವಿವಾಹಿತೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಪಡುವನ್ನೂರು ಗ್ರಾಮದ ಪದಡ್ಕದಲ್ಲಿ ನಡೆದಿದೆ.

ಪುಷ್ಪಾ (22) ಹೃದಯಾಘಾತದಿಂದ ಮೃತಪಟ್ಟವರು.

ಅವರಿಗೆ ಬೆಳಗ್ಗೆ 4 ಗಂಟೆಯ ಸುಮಾರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಆಸ್ಪತ್ರೆ ತಲುಪುವ ಮೊದಲೇ ಪುಷ್ಪಾ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಪುಷ್ಪಾ ಅವರು ಕೇವಲ 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು ಎನ್ನಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top