ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಬಿಜೆಪಿಯ ಚುಕ್ಕಾಣಿ ಹಿಡಿಯಲಿದ್ದಾರೆ.
ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಯಡಿಯೂರಪ್ಪ ಅವರನ್ನು ನೇಮಕಗೊಳಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿರುವ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶಿಸಲಾಗಿದೆ.