ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಯಲಿರುವ 4ನೇ ಜಿಲ್ಲಾ ಸಮ್ಮೇಳನದ ಲಾಂಛನ ಬಿಡುಗಡೆ ನ.11 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಲಾಯಿತು.
ಡಿ.21ರಂದು ಮಂಗಳೂರಿನ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ಜಿಲ್ಲಾ ಸಮ್ಮೇಳನ ನಡೆಯಲಿದ್ದು, ಲಾಂಛನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ ಮೊದಲಾದವರು ಉಪಸ್ಥಿತರಿದ್ದರು.
























